
Pulse of the Public
ಕಾಲ್ಪನಿಕ ಚಿತ್ರಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಮುಧೋಳ ತಾಲೂಕಿನ ಮಂಟೂರ ಗ್ರಾಮದ ಮೂವರು ಬಾಲಕರು ಪೊಲೀಸ್ ಠಾಣೆಗೆ ತೆರಳಿ ಸಿಪಿಐ ನಾಗರೆಡ್ಡಿ ಅವರಿಗೆ ಅರ್ಜಿ ಸಲ್ಲಿಸಿ ಮೆಚ್ಚುಗೆ ಪಡೆದಿದ್ದಾರೆ.
ಶಿಗ್ಗಾಂವಿ ಪಟ್ಟಣದ ಟ್ಯಾಕ್ಸಿ ಸ್ಟ್ಯಾಂಡ್ ಬಳಿಯ ಐತಿಹಾಸಿಕ ಆಂಜನೇಯ ಸ್ವಾಮಿ ದೇವಾಲಯದ ಆವರಣವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ಪ್ರತಿಭಟನೆಗೆ ಕಾರಣವಾಗಿದ್ದು, ತಾಲೂಕಿನಾದ್ಯಂತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಹರಿಹರ ಆರೋಗ್ಯ ಮಾತೆಯ ವಾರ್ಷಿಕ ಮಹೋತ್ಸವದ ಹಿನ್ನೆಲೆಯಲ್ಲಿ ಹರಿಹರದ ಮೈನರ್ ಬಸಿಲಿಕಾದಲ್ಲಿ ಒಂಬತ್ತನೇ ದಿನದ ನೊವೇನಾ ಪ್ರಾರ್ಥನೆ ಹಾಗೂ ಪವಿತ್ರ ದಿವ್ಯ ಬಲಿಪೂಜೆ ನೆರವೇರಿತು.
ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸುಳ್ಯ ತಾಲೂಕಿನ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ನಡೆಯಿತು. ಧಾರ್ಮಿಕ ಪೂಜೆ, ಭಜನೆ, ಆಟೋಟ ಸ್ಪರ್ಧೆಗಳು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಈ ಸಂದರ್ಭದಲ್ಲಿ ಜರುಗಿದವು.