
Pulse of the Public

ಚನ್ನಗಿರಿ ಉಪವಿಭಾಗದ ಶಾಂತಿಸಾಗರ ವಲಯದ ಯಡೇಹಳ್ಳಿಯಲ್ಲಿ ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ 3 ವರ್ಷದ ಗಂಡು ಕರಡಿ ಮೃತಪಟ್ಟಿದೆ. ಕಳೆಬರವನ್ನು ಹೂತುಹಾಕಿದ್ದ ತೋಟದ ಮಾಲೀಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ತರೀಕೆರೆ ತಾಲೂಕಿನ ಭದ್ರಾ ಜಲಾಶಯದ ಇನ್-ಟೇಕ್ ಪಾಯಿಂಟ್ನಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ 3 ಟಿ.ಎಂ.ಸಿ ನೀರು ಬಿಡುಗಡೆಗೆ ಚಾಲನೆ ನೀಡಲಾಗಿದೆ. ಸಚಿವ ಟಿ. ರಘುಮೂರ್ತಿ ಮತ್ತು ತರೀಕೆರೆ ಶಾಸಕ ಜಿ. ಎಚ್. ಶ್ರೀನಿವಾಸ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 72 ವರ್ಷದ ರೈತರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ.
ಔರಾದ್ ಮತ್ತು ಕಮಲನಗರ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲು ಹಾಗೂ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ನೀಡಲು ಆಗ್ರಹಿಸಿ ರೈತ ಸಂಘದ ಮುಖಂಡರು ಔರಾದ್ನ ಎಪಿಎಂಸಿ ವೃತ್ತದಲ್ಲಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.