
Pulse of the Public

ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ₹25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ತಾಯಿ ಎದೆಹಾಲು ಶೇಖರಣಾ ಘಟಕವು ಅಗತ್ಯ ತಾಂತ್ರಿಕ ಉಪಕರಣ ಖರೀದಿಗೆ ₹36 ಲಕ್ಷ ಅನುದಾನ ಸಿಗದೆ ಉದ್ಘಾಟನೆಯಾಗಿ 4 ತಿಂಗಳಾದರೂ ಕಾರ್ಯಾರಂಭ ಮಾಡಿಲ್ಲ.
ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಲ-ಮೂತ್ರದ ಗುಂಡಿಯನ್ನು ಕೈಯಿಂದ ಸ್ವಚ್ಛಗೊಳಿಸಿದ ಆರೋಪದ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿ ಡಾ. ಶಂಕರ್ ಹಿರೇಗೌಡ್ರು ಮತ್ತು ನರ್ಸ್ ವನಿತಾ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮತ್ತೊಂದೆಡೆ ವೈದ್ಯರ ಏಕಾಏಕಿ ಅಮಾನತು ಖಂಡಿಸಿ ಸವಣೂರಿನಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.
ಪುತ್ತೂರಿನ ಜಿಮ್ ಒಂದರಲ್ಲಿ ಅಭ್ಯಾಸ ಮಾಡುತ್ತಿದ್ದ ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ 20 ವರ್ಷದ ವಿದ್ಯಾರ್ಥಿ ಶಮಿಕ್ ರೈ ಶನಿವಾರ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಸೆಪ್ಟೆಂಬರ್ 7ರಂದು ಕಾಗವಾಡ ತಾಲೂಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಅಭಾವ ಹಾಗೂ ಬಸ್ ನಿಲ್ದಾಣದ ಮೂಲಸೌಕರ್ಯಗಳ ಕೊರತೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.