
Pulse of the Public
ಕಾಲ್ಪನಿಕ ಚಿತ್ರಯಲಹಂಕದ ವಿದ್ಯಾಶಿಲ್ಪ ಜಂಕ್ಷನ್ವರೆಗೆ ವಿಸ್ತರಿಸಿರುವ ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆಯಲ್ಲಿ ದ್ವಿಚಕ್ರ ವಾಹನಗಳನ್ನು ನಿಷೇಧಿಸುವ ಪ್ರಸ್ತಾವನೆಯನ್ನು ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ. ಪ್ರಾಯೋಗಿಕ ಜಾರಿಯ ವೇಳೆ ಕೆಳಸೇತುವೆ ರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ರಾಮದುರ್ಗ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯ ಕೊರತೆಯಿಂದಾಗಿ ಗ್ರಾಮೀಣ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪರದಾಡುತ್ತಿದ್ದಾರೆ. ನಿಷ್ಕ್ರಿಯಗೊಂಡಿರುವ ನೀರಿನ ಘಟಕ ದುರಸ್ತಿಗೊಳಿಸಿ ಕನಿಷ್ಠ ಸೌಲಭ್ಯ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ತಿರುಪತಿಯಿಂದ ಹಿಂತಿರುಗುತ್ತಿದ್ದಾಗ ಕೆಜಿಎಫ್ ತಾಲೂಕಿನ ದೊಡ್ಡಕರಿ ಗ್ರಾಮದ ಬಳಿ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇಯಲ್ಲಿ ಕಾರು ಚರಂಡಿ ಗೋಡೆಗೆ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗಿರಿಶಿನಕೊಪ್ಪ ಗ್ರಾಮಕ್ಕೆ ಸರಿಯಾದ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದು, ತಕ್ಷಣವೇ ನಿಯಮಿತ ಬಸ್ ಸೇವೆ ಆರಂಭಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.