
Pulse of the Public
ಕಾಲ್ಪನಿಕ ಚಿತ್ರಸುಪ್ರೀಂ ಕೋರ್ಟ್ ನಿರ್ದೇಶನದಂತೆ ಓಝೋನ್ ಗ್ರೂಪ್ ಮತ್ತು ವಿವಾನ್ಸಾ ಸಂಸ್ಥೆಗಳ ವಿರುದ್ಧ ಸಿಬಿಐ 5 ನೂತನ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದು, ಬೆಂಗಳೂರು ಸೇರಿ 12 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಕಿರಿಯ ಅಧಿಕಾರಿಗೆ ಪೇಪರ್ವೇಟ್ ಎಸೆದು ಗಾಯಗೊಳಿಸಿದ ಆರೋಪ ಎದುರಿಸುತ್ತಿರುವ ಮಾಜಿ ಪೊಲೀಸ್ ಸೂಪರಿಂಟೆಂಡೆಂಟ್ ವಿರುದ್ಧದ ಕ್ರಿಮಿನಲ್ ನಡಾವಳಿಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ಬೆಂಗಳೂರಿನಲ್ಲಿ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ನಂಬಿಸಿ ತಾಯಿಯೊಬ್ಬರಿಂದ ₹1.4 ಕೋಟಿ ವಂಚಿಸಿದ ಆರೋಪ ಹೊತ್ತಿರುವ ದಂಪತಿಯ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್, ಅವರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ.
ನಕಲಿ ಸುಪ್ರೀಂ ಕೋರ್ಟ್ ಆದೇಶಪತ್ರ ತೋರಿಸಿ ಬೆಂಗಳೂರು ಕೇಂದ್ರ ಕಾರಾಗೃಹದಿಂದ ಹೊರನಡೆದಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಮತ್ತು ಆತನಿಗೆ ನೆರವಾದ ಜೈಲು ಸಿಬ್ಬಂದಿಯನ್ನು 8 ವರ್ಷಗಳ ನಂತರ ಪೊಲೀಸರು ಬಂಧಿಸಿದ್ದಾರೆ.