
Pulse of the Public

ಭದ್ರಾ ಮೇಲ್ದಂಡೆ ಯೋಜನೆಯ ಪ್ರಾಯೋಗಿಕ ಪರೀಕ್ಷೆಯ ಭಾಗವಾಗಿ ಸೆಪ್ಟೆಂಬರ್ 9 ರಂದು ಚಿತ್ರದುರ್ಗ ತಾಲೂಕಿನ ಗೊನೂರು ಕೆರೆಗೆ ನೀರು ಹರಿದು ಬಂದಿದ್ದು, ಬರದ ನಾಡಿನ ಜನರಲ್ಲಿ ಹೊಸ ಭರವಸೆ ಮೂಡಿಸಿದೆ.
ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಹಳ್ಳಿಯಲ್ಲಿ ದುಷ್ಕರ್ಮಿಗಳು ಹೂವಿನ ಬೆಳೆ ರಕ್ಷಣಾ ಕವರ್ಗಳನ್ನು ಕತ್ತರಿಸಿ ನಾಶಪಡಿಸಿದ್ದಾರೆ. ರಕ್ಷಣೆ ನೀಡುತ್ತಿದ್ದ ₹50,000 ಮೌಲ್ಯದ ಶೇಡ್ನೆಟ್ ಕವರ್ ಹಾಳಾಗಿದ್ದು, ಯುವ ರೈತ ಜಿ.ಎಂ. ಸುಧಾಕರ್ ಕಂಗಾಲಾಗಿದ್ದಾರೆ.
ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ ಎರಡನೇ ಬರಪೀಡಿತ ತಾಲೂಕುಗಳ ಪಟ್ಟಿಯಿಂದಲೂ ಕಮಲನಗರ ತಾಲೂಕನ್ನು ಕೈಬಿಟ್ಟಿರುವುದಕ್ಕೆ ಸ್ಥಳೀಯ ನಾಯಕರು ಹಾಗೂ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಮರು ಸಮೀಕ್ಷೆ ನಡೆಸಿ ಬರ ಪರಿಹಾರ ನೀಡುವಂತೆ ಆಗ್ರಹಿಸಲಾಗಿದೆ.
ಹುಲಸೂರು ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ಬೆಳೆ ನಷ್ಟ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಪಟ್ಟಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿವೆ.