
Pulse of the Public
ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವುದನ್ನು ವಿರೋಧಿಸಿ ಮೈಸೂರಿನ ಚೆಲುವಾಂಬ ಪಾರ್ಕ್ನಲ್ಲಿ ನಾಗರಿಕರು ಹಾಗೂ ಪರಿಸರಾಸಕ್ತರು ಬೃಹತ್ ಪ್ರತಿಭಟನೆ ನಡೆಸಿದರು. ಉದ್ಯಾನವನಗಳ ಜಾಗವನ್ನು ಸಾರ್ವಜನಿಕ ಮೂಲಸೌಕರ್ಯ ನಿರ್ಮಾಣಕ್ಕೆ ಬಳಕೆ ಮಾಡಲು ಅವಕಾಶ ನೀಡಿದರೆ ನಗರದ ಹಸಿರು ವಲಯ ನಾಶವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಶೇಕಡಾ 57 ರಿಂದ 74 ರಷ್ಟು ತೀವ್ರ ಮಳೆ ಕೊರತೆಯಾಗಿದ್ದು, ತಕ್ಷಣವೇ ಬರ ಪೀಡಿತ ಪ್ರದೇಶ ಘೋಷಿಸಲು ಎನ್ಡಿಆರ್ಎಫ್ ನಿಯಮಗಳನ್ನು ಸಡಿಲಗೊಳಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಹಾವೇರಿಯ ಬಸವೇಶ್ವರ ನಗರದಲ್ಲಿ ₹4.15 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಲೋಕಾಯುಕ್ತ ಕಚೇರಿ ನೂತನ ಕಟ್ಟಡಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಶಂಕುಸ್ಥಾಪನೆ ನೆರವೇರಿಸಿದರು.
ಕರ್ನಾಟಕ ಸರ್ಕಾರವು 2013 ನೇ ಬ್ಯಾಚ್ನ ಐಎಎಸ್ ಅಧಿಕಾರಿ ಎಸ್ ರಮ್ಯಾ ಅವರನ್ನು ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.