
Pulse of the Public

ಮೈಸೂರು ಜಿಲ್ಲೆಯ ಕೃಷ್ಣರಾಜನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶ್ರೀನಿವಾಸ ಡಿ ಅವರಿಗೆ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಬಿಲ್ಲೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯು ಶಿಕ್ಷಕಿ ರೂಪಾ ಅವರ ಪರಿಶ್ರಮದಿಂದ ಪುನಶ್ಚೇತನಗೊಂಡಿದೆ. ೨೦೨೩ರಲ್ಲಿ ಕೇವಲ ೬ ಮಕ್ಕಳಿದ್ದು ಮುಚ್ಚುವ ಹಂತದಲ್ಲಿದ್ದ ಶಾಲೆ, ಇದೀಗ ೧೬ ವಿದ್ಯಾರ್ಥಿಗಳ ದಾಖಲಾತಿ ಪಡೆಯುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಶ್ರೀನಿವಾಸಪುರದ ಶ್ರೀ ವೇಣು ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಅಡುಗೆ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪೋಷಕರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ ತಾಲೂಕಿನ ಶಾಂತಿಗ್ರಾಮದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮೂಲಸೌಕರ್ಯ ಕೊರತೆ ವರದಿಯಾದ ಹಿನ್ನೆಲೆಯಲ್ಲಿ, 172 ವಿದ್ಯಾರ್ಥಿಗಳನ್ನು ಪರ್ಯಾಯ ವಸತಿನಿಲಯಗಳಿಗೆ ಸ್ಥಳಾಂತರಿಸಲಾಗಿದೆ.