
Pulse of the Public

ಹೆಚ್ಚಿನ ಮಾಹಿತಿಗಾಗಿ, AI Pragati ಗೆ ಭೇಟಿ ನೀಡಿ (www.aipragati.in).
ಮಂಗಳೂರಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ 21 ಶಿಕ್ಷಕರಿಗೆ 'ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ' ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ 48 ಶಾಲಾ ಶಿಕ್ಷಕರಿಗೆ 2026 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪ್ರದಾನ ಮಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಾಗಿ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಯಾದಗಿರಿ ತಾಲೂಕಿನ ಮುದ್ನಾಳ ಹಾಗೂ ಹೊನಗೇರಾ ಸರ್ಕಾರಿ ಶಾಲೆಗಳಿಗೆ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ ಭೇಟಿ ನೀಡಿ ಶೈಕ್ಷಣಿಕ ವ್ಯವಸ್ಥೆ ಪರಿಶೀಲಿಸಿದ್ದು, ಮಕ್ಕಳೊಂದಿಗೆ ಬಿಸಿಯೂಟ ಸೇವಿಸಿದರು.
ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯ ಛಾವಣಿ ಕುಸಿದು ವಿದ್ಯಾರ್ಥಿಗಳು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾರಿ ಮುಖ್ಯಶಿಕ್ಷಕ ಹಾಗೂ ಇಬ್ಬರು ಎಂಜಿನಿಯರ್ಗಳನ್ನು ಅಮಾನತುಗೊಳಿಸಲಾಗಿದೆ. ಘಟನೆಯ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.