
Pulse of the Public
ಕಾಲ್ಪನಿಕ ಚಿತ್ರಚನ್ನಗಿರಿ ಉಪವಿಭಾಗದ ಶಾಂತಿಸಾಗರ ವಲಯದ ಯಡೇಹಳ್ಳಿಯಲ್ಲಿ ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ 3 ವರ್ಷದ ಗಂಡು ಕರಡಿ ಮೃತಪಟ್ಟಿದೆ. ಕಳೆಬರವನ್ನು ಹೂತುಹಾಕಿದ್ದ ತೋಟದ ಮಾಲೀಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ತರೀಕೆರೆ ತಾಲೂಕಿನ ಭದ್ರಾ ಜಲಾಶಯದ ಇನ್-ಟೇಕ್ ಪಾಯಿಂಟ್ನಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ 3 ಟಿ.ಎಂ.ಸಿ ನೀರು ಬಿಡುಗಡೆಗೆ ಚಾಲನೆ ನೀಡಲಾಗಿದೆ. ಸಚಿವ ಟಿ. ರಘುಮೂರ್ತಿ ಮತ್ತು ತರೀಕೆರೆ ಶಾಸಕ ಜಿ. ಎಚ್. ಶ್ರೀನಿವಾಸ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಭಾಲ್ಕಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಕಾಡುಹಂದಿ ದಾಳಿಯಿಂದ ಮೃತಪಟ್ಟ ರೈತ ಚನ್ನಬಸಪ್ಪ ಭೂರೇ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ₹20 ಲಕ್ಷ ಪರಿಹಾರದ ಚೆಕ್ ವಿತರಿಸಿದರು.
ಔರಾದ್ ಮತ್ತು ಕಮಲನಗರ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲು ಹಾಗೂ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ನೀಡಲು ಆಗ್ರಹಿಸಿ ರೈತ ಸಂಘದ ಮುಖಂಡರು ಔರಾದ್ನ ಎಪಿಎಂಸಿ ವೃತ್ತದಲ್ಲಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.