
Pulse of the Public

ಕರ್ನಾಟಕ ಸರ್ಕಾರವು 2013 ನೇ ಬ್ಯಾಚ್ನ ಐಎಎಸ್ ಅಧಿಕಾರಿ ಎಸ್ ರಮ್ಯಾ ಅವರನ್ನು ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಪೊಲೀಸ್ ಕಾಯ್ದೆಯಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್ಪಿ) ಗಡಿಪಾರು ಆದೇಶಗಳನ್ನು ಹೊರಡಿಸಲು ಅಧಿಕಾರ ನೀಡಿದ್ದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಹಡ್ಸನ್ ವೃತ್ತದಿಂದ ಚಾಲುಕ್ಯ ವೃತ್ತದವರೆಗಿನ ರಸ್ತೆಯಲ್ಲಿ 140 ಬೀದಿ ದೀಪಗಳು ಉರಿಯದಿರುವುದನ್ನು ಆಕಸ್ಮಿಕ ತಪಾಸಣೆ ವೇಳೆ ಪತ್ತೆ ಹಚ್ಚಿದ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ವಿ. ರಮೇಶ್ ಅವರನ್ನು ಅಮಾನತುಗೊಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಖಜಾನೆ ಕಚೇರಿ ಮೇಲೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ದಾಳಿ ನಡೆಸಿ, ಉಪ ನಿರ್ದೇಶಕರ ಬಳಿಯಿದ್ದ ₹1.35 ಲಕ್ಷ ಅಕ್ರಮ ನಗದು ವಶಪಡಿಸಿಕೊಂಡಿದ್ದಾರೆ.