
Pulse of the Public
ಕಾಲ್ಪನಿಕ ಚಿತ್ರತರೀಕೆರೆ ತಾಲೂಕಿನ ಭದ್ರಾ ಜಲಾಶಯದ ಇನ್-ಟೇಕ್ ಪಾಯಿಂಟ್ನಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ 3 ಟಿ.ಎಂ.ಸಿ ನೀರು ಬಿಡುಗಡೆಗೆ ಚಾಲನೆ ನೀಡಲಾಗಿದೆ. ಸಚಿವ ಟಿ. ರಘುಮೂರ್ತಿ ಮತ್ತು ತರೀಕೆರೆ ಶಾಸಕ ಜಿ. ಎಚ್. ಶ್ರೀನಿವಾಸ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 72 ವರ್ಷದ ರೈತರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ.
ಭಾಲ್ಕಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಕಾಡುಹಂದಿ ದಾಳಿಯಿಂದ ಮೃತಪಟ್ಟ ರೈತ ಚನ್ನಬಸಪ್ಪ ಭೂರೇ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ₹20 ಲಕ್ಷ ಪರಿಹಾರದ ಚೆಕ್ ವಿತರಿಸಿದರು.
ಔರಾದ್ ಮತ್ತು ಕಮಲನಗರ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲು ಹಾಗೂ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ನೀಡಲು ಆಗ್ರಹಿಸಿ ರೈತ ಸಂಘದ ಮುಖಂಡರು ಔರಾದ್ನ ಎಪಿಎಂಸಿ ವೃತ್ತದಲ್ಲಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.