
Pulse of the Public
ಕಾಲ್ಪನಿಕ ಚಿತ್ರಔರಾದ್ ತಾಲೂಕಿನ ಖಂಡಿಕೇರಿ ಗ್ರಾಮದ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ 60.43 ಕೆಜಿ ತೂಕದ 100 ಹಸಿ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಮೂಡಲಗಿ ತಾಲೂಕಿನ ಕುಲಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಂಗಳ ಹಿಂದೆ ನಾಪತ್ತೆಯಾಗಿದ್ದ 34 ವರ್ಷದ ಮಹಿಳೆಯ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಗಲಾಟೆ ಎಬ್ಬಿಸಿದ್ದ ಯಕ್ಸಂಬಾದ ಅನಿಲ ಪೂಜಾರಿಗೆ ಚಿಕ್ಕೋಡಿ ಜೆಎಂಎಫ್ಸಿ ನ್ಯಾಯಾಲಯ 50 ಸಸಿ ನೆಡುವ ವಿನೂತನ ಶಿಕ್ಷೆ ವಿಧಿಸಿದೆ. ತೀರ್ಪಿನಂತೆ ಆರೋಪಿಯು ತನ್ನ ಪತ್ನಿಯೊಂದಿಗೆ ಚಿಕ್ಕೋಡಿ ಕೋರ್ಟ್ ಹಾಗೂ ಸದಲಗಾ ಪೊಲೀಸ್ ಠಾಣೆ ಆವರಣದಲ್ಲಿ ಸಸಿಗಳನ್ನು ನೆಟ್ಟಿದ್ದಾರೆ.
ಆಲೂರು ತಾಲూಕಿನ ಅಬ್ಬಾನ ಗ್ರಾಮದಲ್ಲಿನ 37 ಎಕರೆ ಜಮೀನಿಗೆ 82.71 ಲಕ್ಷ ರೂ. ಹೆಚ್ಚುವರಿ ಮುದ್ರಾಂಕ ಶುಲ್ಕ ಪಾವತಿಸುವಂತೆ ಹೊರಡಿಸಲಾಗಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ದಾಖಲೆಗಳಿಲ್ಲದೆ ಕೇವಲ ಭವಿಷ್ಯದ ವಾಣಿಜ್ಯ ಅಥವಾ ರೆಸಾರ್ಟ್ ಬಳಕೆಯ ಆಧಾರದ ಮೇಲೆ ಮುದ್ರಾಂಕ ಶುಲ್ಕವನ್ನು ಹೆಚ್ಚಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ತೀರ್ಪು ನೀಡಿದ್ದಾರೆ.