
Pulse of the Public
ಕಾಲ್ಪನಿಕ ಚಿತ್ರನೆಲಮಂಗಲದ ಬಸವಣ್ಣ ದೇವರ ಮಠದ ಆವರಣದಲ್ಲಿ ಸೆಪ್ಟೆಂಬರ್ 25ರಂದು ನಡೆಯಲಿರುವ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಕರಪತ್ರವನ್ನು ಶ್ರೀ ಸಿದ್ದಲಿಂಗ ಸ್ವಾಮೀಜಿ ಬಿಡುಗಡೆ ಮಾಡಿದರು.
ಬಾಗಲಕೋಟೆ ತಾಲೂಕಿನ ಗದ್ದನಕೇರಿ ತಾಂಡಾದ ಪ್ರಸಿದ್ಧ ದುರ್ಗಾದೇವಿ ದೇವಸ್ಥಾನದ 3 ಕೋಟಿ ರೂ. ಹಣ ಹಾಗೂ 5 ಕೆಜಿ ಚಿನ್ನದ ಲೆಕ್ಕದ ವಿವಾದ ಸಂಧಾನದ ಮೂಲಕ ಸುಖಾಂತ್ಯ ಕಂಡಿದೆ. ಬಂಜಾರ ಮುಖಂಡರು ನಡೆಸಿದ ಸಭೆಯಲ್ಲಿ ಸಂಪೂರ್ಣ ಲೆಕ್ಕ ಒಪ್ಪಿಸಲಾಗಿದ್ದು, ಎರಡೂ ಬಣಗಳು ದ್ವೇಷ ಮರೆತು ಮುಂಬರುವ ಜಾತ್ರೆಯನ್ನು ಒಗ್ಗಟ್ಟಿನಿಂದ ಆಚರಿಸಲು ನಿರ್ಧರಿಸಿವೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಮುಧೋಳ ತಾಲೂಕಿನ ಮಂಟೂರ ಗ್ರಾಮದ ಮೂವರು ಬಾಲಕರು ಪೊಲೀಸ್ ಠಾಣೆಗೆ ತೆರಳಿ ಸಿಪಿಐ ನಾಗರೆಡ್ಡಿ ಅವರಿಗೆ ಅರ್ಜಿ ಸಲ್ಲಿಸಿ ಮೆಚ್ಚುಗೆ ಪಡೆದಿದ್ದಾರೆ.
ಶಿಗ್ಗಾಂವಿ ಪಟ್ಟಣದ ಟ್ಯಾಕ್ಸಿ ಸ್ಟ್ಯಾಂಡ್ ಬಳಿಯ ಐತಿಹಾಸಿಕ ಆಂಜನೇಯ ಸ್ವಾಮಿ ದೇವಾಲಯದ ಆವರಣವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ಪ್ರತಿಭಟನೆಗೆ ಕಾರಣವಾಗಿದ್ದು, ತಾಲೂಕಿನಾದ್ಯಂತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.