
Pulse of the Public
ಕಾಲ್ಪನಿಕ ಚಿತ್ರಗೋಕಾಕ್ ಜಲಪಾತದಲ್ಲಿ ₹40 ಕೋಟಿ ವೆಚ್ಚದ ಕೇಬಲ್ ಕಾರ್ ಯೋಜನೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಅಂತಿಮ ಮಂಜೂರಾತಿಗಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.
ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತ ವೀಕ್ಷಣೆಗೆ ಸೆಪ್ಟೆಂಬರ್ 7ರಿಂದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಅನುಮತಿ ನೀಡಿದ್ದು, ಗಡಾಯಿಕಲ್ಲು ಚಾರಣದ ಮೇಲಿನ ನಿಷೇಧವನ್ನು ಮುಂದುವರಿಸಿದೆ.
ಮಂಗಳೂರಿನ ತಣ್ಣೀರುಬಾವಿ ಬ್ಲೂ ಫ್ಲ್ಯಾಗ್ ಕಡಲತೀರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, ಹಾಲಿ ಇರುವ ಕಡಲತೀರಗಳ ಮೂಲಸೌಕರ್ಯ ಮೇಲ್ದರ್ಜೆಗೇರಿಸುವುದರ ಜೊತೆಗೆ ಕ್ರೂಸ್ ಹಾಗೂ ಹೌಸ್ಬೋಟ್ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.
ಕರ್ನಾಟಕದ ಪ್ರವಾಸೋದ್ಯಮ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಕುಂದಾಪುರ ತಾಲೂಕಿನ ತ್ರಾಸಿ-ಮರವಂತೆ ಬೀಚ್ಗೆ ಭೇಟಿ ನೀಡಿ ಕರಾವಳಿ ಪ್ರವಾಸೋದ್ಯಮ ಯೋಜನೆಗಳನ್ನು ಪರಿಶೀಲಿಸಿದರು.