
Pulse of the Public
ಕಾಲ್ಪನಿಕ ಚಿತ್ರಮೂಡಿಗೆರೆ ತಾಲೂಕಿನಲ್ಲಿ ನಿರ್ಲಕ್ಷ್ಯಕ್ಕೊಳಗಾದ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡವೊಂದು ಕುರಿ ಕೊಟ್ಟಿಗೆಯಾಗಿ ಪರಿವರ್ತನೆಯಾಗಿದ್ದು, ಗ್ರಾಮೀಣ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಸ್ಥಳೀಯ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬ್ಯಾಂಕ್ ಸಾಲ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೆಹಳ್ಳಿಯ ಆತ್ರೇಯ ಆಯುರ್ವೇದ ಕಾಲೇಜಿಗೆ ಸಿಟಿ ಯೂನಿಯನ್ ಬ್ಯಾಂಕ್ ಬೀಗ ಹಾಕಿದ್ದು, ಶೈಕ್ಷಣಿಕ ಭವಿಷ್ಯ ರಕ್ಷಣೆಗಾಗಿ ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಪೋಷಕರ ಆರೋಪದ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆಗೆ ಸಾರ್ವಜನಿಕರು ಹಾಗೂ ಆಡಳಿತ ಆಗ್ರಹಿಸಿವೆ.
ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಯುವ ಮುಖಂಡ ಚಿದಾನಂದ ಸವದಿ ಉದ್ಘಾಟಿಸಿದರು.