
Pulse of the Public

ಹಾವೇರಿಯ ಬಸವೇಶ್ವರ ನಗರದಲ್ಲಿ ₹4.15 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಲೋಕಾಯುಕ್ತ ಕಚೇರಿ ನೂತನ ಕಟ್ಟಡಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಶಂಕುಸ್ಥಾಪನೆ ನೆರವೇರಿಸಿದರು.
ಕರ್ನಾಟಕ ಸರ್ಕಾರವು 2013 ನೇ ಬ್ಯಾಚ್ನ ಐಎಎಸ್ ಅಧಿಕಾರಿ ಎಸ್ ರಮ್ಯಾ ಅವರನ್ನು ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.
ಹಡ್ಸನ್ ವೃತ್ತದಿಂದ ಚಾಲುಕ್ಯ ವೃತ್ತದವರೆಗಿನ ರಸ್ತೆಯಲ್ಲಿ 140 ಬೀದಿ ದೀಪಗಳು ಉರಿಯದಿರುವುದನ್ನು ಆಕಸ್ಮಿಕ ತಪಾಸಣೆ ವೇಳೆ ಪತ್ತೆ ಹಚ್ಚಿದ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ವಿ. ರಮೇಶ್ ಅವರನ್ನು ಅಮಾನತುಗೊಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಖಜಾನೆ ಕಚೇರಿ ಮೇಲೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ದಾಳಿ ನಡೆಸಿ, ಉಪ ನಿರ್ದೇಶಕರ ಬಳಿಯಿದ್ದ ₹1.35 ಲಕ್ಷ ಅಕ್ರಮ ನಗದು ವಶಪಡಿಸಿಕೊಂಡಿದ್ದಾರೆ.