
Pulse of the Public
ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಐದು ಸದಸ್ಯರ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ನೂತನ ತನಿಖೆಗೆ ಹೈಕೋರ್ಟ್ ಆದೇಶಿಸಿದೆ.
2010ರಲ್ಲಿ ನಡೆದ ಬೈಕ್ ಅಪಘಾತದ ನಕಲಿ ವಿವರಗಳನ್ನು ಸೃಷ್ಟಿಸಿ ವಿಮಾ ಪರಿಹಾರ ಪಡೆಯಲು ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ, ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ಆದೇಶಿಸಿದೆ.
ಪೀಣ್ಯ ನಿವಾಸಿಯೊಬ್ಬರಿಗೆ ₹93.58 ಲಕ್ಷ ವಂಚಿಸಿದ ಬೃಹತ್ ಆನ್ಲೈನ್ ಟ್ರೇಡಿಂಗ್ ಹೂಡಿಕೆ ಜಾಲವನ್ನು ಬೆಂಗಳೂರು ಸೈಬರ್ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಯನಗರ 9ನೇ ಬ್ಲಾಕ್ನಲ್ಲಿ ಚಾಕು ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದ ವಿಡಿಯೋ ವೈರಲ್ ಆದ ನಾಲ್ಕೇ ಗಂಟೆಗಳಲ್ಲಿ ತಿಲಕ್ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.