
Pulse of the Public
ಕಾಲ್ಪನಿಕ ಚಿತ್ರಹತ್ತು ವರ್ಷಗಳಿಗೂ ಹೆಚ್ಚು ಕಾಲ ತಲೆಮರೆಸಿಕೊಂಡಿದ್ದ ಹರ್ನೇಕ್ ಸಿಂಗ್ ಎಂಬ ಆರೋಪಿಯನ್ನು ಅಮೆರಿಕದಿಂದ ಗಡಿಪಾರು ಮಾಡಿದ ನಂತರ ಸಿಬಿಐ ಬಂಧಿಸಿದೆ. ಸಿಂಗಾಪುರದಲ್ಲಿದ್ದ ಭಾರತೀಯರನ್ನು ಗುರಿಯಾಗಿಸಿಕೊಂಡು ನಡೆಸಿದ ಸೈಬರ್ ವಂಚನೆ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದನು.
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್ ಹಾಗೂ ಸಿಮ್ ಕಾರ್ಡ್ ಪೂರೈಸಿದ ಆರೋಪದ ಮೇಲೆ ಜೈಲು ವಾರ್ಡರ್ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ದೇಶದ 20 ರಾಜ್ಯಗಳ 89 ಸ್ಥಳಗಳಲ್ಲಿ 'ಆಪರೇಷನ್ ಚಕ್ರ-6' ಅಡಿಯಲ್ಲಿ ಬೃಹತ್ ದಾಳಿ ನಡೆಸಿದ ಸಿಬಿಐ, 'ಡಿಜಿಟಲ್ ಅರೆಸ್ಟ್' ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಸೈಬರ್ ಅಪರಾಧ ಜಾಲದ ಮೂವರು ಪ್ರಮುಖರನ್ನು ಬಂಧಿಸಿದೆ.
ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಜಾಮೀನು ಪ್ರಕ್ರಿಯೆಗೆ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಸಲ್ಲಿಸಿದ್ದ ಇಬ್ಬರು ವ್ಯಕ್ತಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಲಯದ ಅಧಿಕಾರಿಗಳ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.