
Pulse of the Public
ಕಾಲ್ಪನಿಕ ಚಿತ್ರಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ನಿವೃತ್ತ ಯೋಧ ಮತ್ತು ಅವರ ಮಗಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೈಸೂರಿನಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯ ಶಿಕ್ಷೆ ತಡೆ ಮತ್ತು ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಬಲವಾದ ಸಾಕ್ಷ್ಯಗಳು ಇರುವುದನ್ನು ಪೀಠ ಗಮನಿಸಿದೆ.
2016ರ ಯೋಗೀಶ್ ಗೌಡ ಕೊಲೆ ಪ್ರಕರಣದ ಏಳು ಅಪರಾಧಿಗಳಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಅಮಾನತುಗೊಳಿಸಿದ್ದು, ಮೇಲ್ಮನವಿ ಇತ್ಯರ್ಥವಾಗುವವರೆಗೆ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಕರ್ನಾಟಕದ ಎಲ್ಲಾ ಪೊಲೀಸ್ ಠಾಣೆಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳು ಮತ್ತು ಯುಪಿಎಸ್ ಬ್ಯಾಕಪ್ ವ್ಯವಸ್ಥೆಗಳ ಸಂಪೂರ್ಣ ತಾಂತ್ರಿಕ ಹಾಗೂ ಆಡಳಿತಾತ್ಮಕ ಪರಿಶೋಧನೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.