
Pulse of the Public

ಹೆಚ್ಚಿನ ಮಾಹಿತಿಗಾಗಿ, AI Pragati ಗೆ ಭೇಟಿ ನೀಡಿ (www.aipragati.in).
೨೦೨೬ರ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಕರ್ನಾಟಕ ಸರ್ಕಾರವು ರಾಜ್ಯದ ಶಿಕ್ಷಕರಿಗೆ ತಮ್ಮ ಹೆಸರುಗಳ ಮುಂದೆ 'Tr.' ಎಂಬ ವೃತ್ತಿಪರ ಪದನಾಮವನ್ನು ಬಳಸಲು ಅಧಿಕೃತ ಆದೇಶ ಹೊರಡಿಸಿದೆ.
ಮೂರನೇ ಸುತ್ತಿನ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭವಾಗಿರುವ ನಡುವೆಯೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕೆಸಿಇಟಿ ಅಭ್ಯರ್ಥಿಗಳಿಗೆ ಜಾಗರೂಕತೆಯ ಎಚ್ಚರಿಕೆ ನೀಡಿದೆ. 'ಚಾಯ್ಸ್ 4' ಆಯ್ಕೆ ಮಾಡಿದರೆ ಕೌನ್ಸಿಲಿಂಗ್ನಿಂದ ಸಂಪೂರ್ಣವಾಗಿ ಹೊರಗುಳಿಯಬೇಕಾಗುತ್ತದೆ ಹಾಗೂ ಹಂಚಿಕೆಯಾದ ಸೀಟನ್ನು ತ್ಯಜಿಸಿದರೆ ಭಾರೀ ದಂಡ ವಿಧಿಸಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ.
ಮಂಗಳೂರಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ 21 ಶಿಕ್ಷಕರಿಗೆ 'ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ' ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ 48 ಶಾಲಾ ಶಿಕ್ಷಕರಿಗೆ 2026 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪ್ರದಾನ ಮಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಾಗಿ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.