
Pulse of the Public
ಕಾಲ್ಪನಿಕ ಚಿತ್ರರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಈವರೆಗೆ ಸುಮಾರು ₹400 ಕೋಟಿ ಅನುದಾನ ಹರಿದುಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಚನ್ನಪಟ್ಟಣ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸುವ 'ಪ್ರಜಾಸೇವಾ ಅಭಿಯಾನ'ಕ್ಕೆ ಸಚಿವ ಎಚ್.ಸಿ. ಬಾಲಕೃಷ್ಣ ಚಾಲನೆ ನೀಡಿದರು.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುನ್ನಾಳದಲ್ಲಿ ನಡೆದ ಸಮಾರಂಭದಲ್ಲಿ ಆಡಳಿತಾತ್ಮಕ ಕರ್ತವ್ಯ ನಿರ್ಲಕ್ಷಿಸುವ ಅಧಿಕಾರಿಗಳಿಗೆ ಸಚಿವ ಬಸವರಾಜ ರಾಯರೆಡ್ಡಿ ಸೇವೆಯಿಂದ ವಜಾಗೊಳಿಸುವ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಶಾಸಕ ಡಾ. ಮಂತರ್ ಗೌಡ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.