
Pulse of the Public
ಕಾಲ್ಪನಿಕ ಚಿತ್ರಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಬಿಎಂಟಿಸಿಗೆ 4,500 ಹೊಸ ಎಲೆಕ್ಟ್ರಿಕ್ ಬಸ್ಗಳನ್ನು ಸೇರ್ಪಡೆಗೊಳಿಸಲು ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ.
ಮಂಗಳೂರು ಸೇನಾ ನೇಮಕಾತಿ ಕಚೇರಿ ಹಾಗೂ ವಿಜಯಪುರ ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ 10 ರಿಂದ 22 ರವರೆಗೆ ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಗ್ನಿವೀರ ನೇಮಕಾತಿ ರ್ಯಾಲಿ ನಡೆಯಲಿದೆ.
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರವನ್ನು ಖಂಡಿಸಿ ಬಿಜೆಪಿ ರಾಯಚೂರು ಜಿಲ್ಲೆಯ ಲಿಂಗಸಗೂರಿನಿಂದ 10 ದಿನಗಳ 'ಬಳ್ಳಾರಿ ಚಲೋ' ಪಾದಯಾತ್ರೆಯನ್ನು ಆರಂಭಿಸಿದೆ. ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಅವರು ಯಾತ್ರೆಗೆ ಚಾಲನೆ ನೀಡಿದರು.
ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯ ಕಬಿನಿ ಡ್ಯಾಂ ಬಳಿ ನೂರಾರು ರೈತರು ಪ್ರತಿಭಟನೆ ನಡೆಸಿದರು. ಸ್ಥಳೀಯ ಅಚ್ಚುಕಟ್ಟು ಭಾಗದ ನಾಲೆಗಳಿಗೆ ಹಾಗೂ ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಬೇಕೆಂದು ರೈತ ಸಂಘಟನೆಗಳು ಆಗ್ರಹಿಸಿವೆ.