
Pulse of the Public
ಕಾಲ್ಪನಿಕ ಚಿತ್ರಚನ್ನಗಿರಿ ತಾಲ್ಲೂಕು ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಇತ್ತೀಚೆಗೆ ನಿಧನರಾದ ಶಿಕ್ಷಕ ಹೆಚ್.ಕೆ. ಮಂಜಪ್ಪ ಅವರ ಪತ್ನಿ ಹೆಚ್. ರಾಧಾ ಅವರನ್ನು ಶಾಸಕ ಶಿವಗಂಗಾ ಬಸವರಾಜ್ ಸನ್ಮಾನಿಸಿ ಗೌರವಿಸಿದರು.
ಸುಳ್ಯ ತಾಲೂಕಿನ ಬೆಳ್ಳಾರೆ ಸರಕಾರಿ ಬಾಲಕಿಯರ ವಿದ್ಯಾರ್ಥಿನಿಲಯದ ಆವರಣಕ್ಕೆ ಅತಿಕ್ರಮಿಸಿ ಬಟ್ಟೆ ಕಳವು ಮಾಡಿದ 35 ವರ್ಷದ ವ್ಯಕ್ತಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಬಾಗೇಪಲ್ಲಿ ತಾಲೂಕಿನ ಗೂಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿ. ವೆಂಕಟೇಶ ಅವರು 2026-27ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯು ಗ್ರಾಮೀಣ ಶಿಕ್ಷಣ ಕ್ಷೇತ್ರದಲ್ಲಿ ಅವರ ಗಮನಾರ್ಹ ಸೇವೆಯನ್ನು ಗುರುತಿಸಿ ಈ ಗೌರವಕ್ಕೆ ಆಯ್ಕೆ ಮಾಡಿದೆ.
ಬ್ಯಾಂಕ್ ಸಾಲ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೆಹಳ್ಳಿಯ ಆತ್ರೇಯ ಆಯುರ್ವೇದ ಕಾಲೇಜಿಗೆ ಸಿಟಿ ಯೂನಿಯನ್ ಬ್ಯಾಂಕ್ ಬೀಗ ಹಾಕಿದ್ದು, ಶೈಕ್ಷಣಿಕ ಭವಿಷ್ಯ ರಕ್ಷಣೆಗಾಗಿ ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.