
Pulse of the Public

ಬೈಲಹೊಂಗಲ ತಾಲೂಕಿನ ಸಣಿಕೊಪ್ಪ ಗ್ರಾಮದಲ್ಲಿ ವಿದ್ಯುತ್ ಕಂಬ ದುರಸ್ತಿ ಕಾರ್ಯದ ವೇಳೆ ವಿದ್ಯುತ್ ಪ್ರವಹಿಸಿ ಗುತ್ತಿಗೆ ಕಾರ್ಮಿಕರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಘಟನೆಯ ಬೆನ್ನಲ್ಲೇ ಮೃತನ ಕುಟುಂಬಕ್ಕೆ ಪರಿಹಾರ ಹಾಗೂ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ತಡರಾತ್ರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ಅವಘಡಕ್ಕೆ 30ಕ್ಕೂ ಹೆಚ್ಚು ತಾತ್ಕಾಲಿಕ ಶೆಡ್ಗಳು ಭಸ್ಮವಾದ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪುನರ್ವಸತಿ ಮತ್ತು ಪರಿಹಾರದ ಭರವಸೆ ನೀಡಿದ್ದಾರೆ.
ಬಾದಾಮಿ ನಗರದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ₹16 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭೂಮಿಪೂಜೆ ನೆರವೇರಿಸಿದರು.
ಕುಕನೂರು ತಾಲೂಕಿನ ಗುನ್ನಾಳ ಗ್ರಾಮದಲ್ಲಿ ನಡೆದ ಜನಸಂದರ್ಶನದಲ್ಲಿ ಸಚಿವ ಬಸವರಾಜ ರಾಯರಡ್ಡಿ, ಕುಕನೂರು ಹಾಗೂ ಯಲಬುರ್ಗಾ ತಾಲೂಕುಗಳ 34 ಕೆರೆಗಳನ್ನು ತುಂಬಿಸುವ ₹970 ಕೋಟಿ ವೆಚ್ಚದ ಯೋಜನೆಗೆ 20 ದಿನಗಳಲ್ಲಿ ಚಾಲನೆ ದೊರೆಯಲಿದೆ ಎಂದು ತಿಳಿಸಿದರು.