
Pulse of the Public

ಕೊಪ್ಪಳ ಜಿಲ್ಲೆಯ ಗಂಗಾವತಿ ಸಷನ್ಸ್ ನ್ಯಾಯಾಲಯದ ನ್ಯಾಯಾಧೀಶರೊಂದಿಗೆ ಅಸಭ್ಯವಾಗಿ ವರ್ತಿಸಿದ ಬಳ್ಳಾರಿಯ ವಕೀಲರಿಗೆ 1,000 ಹಣ್ಣಿನ ಗಿಡಗಳನ್ನು ನೆಡುವಂತೆ ಕರ್ನಾಟಕ ಹೈಕೋರ್ಟ್ ವಿನೂತನ ಶಿಕ್ಷೆ ವಿಧಿಸಿದೆ.
ರಾಷ್ಟ್ರೀಯ ಅಪರಾಧ ತನಿಖಾ ಸಂಸ್ಥೆಯ (ಎನ್ಸಿಐಬಿ) ಅಧಿಕಾರಿ ಎಂದು ಹೇಳಿಕೊಂಡು ಬೆದರಿಕೆ ಒಡ್ಡಿ ಹಣ ವಸೂಲಿ ಮಾಡುತ್ತಿದ್ದ 64 ವರ್ಷದ ಕೇರಳ ಮೂಲದ ಸ್ಯಾಮ್ ಪೀಟರ್ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
2013ರಲ್ಲಿ ಮೈಸೂರಿನಲ್ಲಿ ಮನೆಗೆ ಬೆಂಕಿ ಹಚ್ಚಿ ಆರು ಜನರ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ, ವಿಚಾರಣಾ ನ್ಯಾಯಾಲಯದ ಖುಲಾಸೆ ಆದೇಶವನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ 63 ವರ್ಷದ ಮಾಜಿ ಕೆಎಸ್ಆರ್ಟಿಸಿ ಚಾಲಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
₹1.5 ಲಕ್ಷ ಸಾಲದ ವಿವಾದಕ್ಕೆ ಸಂಬಂಧಿಸಿದಂತೆ ನಗರದ ಹೊರವಲಯದ ಮನೆಯೊಂದರಲ್ಲಿ ಮೂರು ದಿನಗಳ ಕಾಲ ವಶದಲ್ಲಿರಿಸಲಾಗಿದ್ದ ಮಹಿಳೆಯನ್ನು ಬೆಂಗಳೂರು ಪೊಲೀಸರು ರಕ್ಷಿಸಿದ್ದು, ಮೂವರನ್ನು ಬಂಧಿಸಿದ್ದಾರೆ.