
Pulse of the Public
ಕಾಲ್ಪನಿಕ ಚಿತ್ರಹರಿಹರ ಆರೋಗ್ಯ ಮಾತೆಯ ವಾರ್ಷಿಕ ಮಹೋತ್ಸವದ ಹಿನ್ನೆಲೆಯಲ್ಲಿ ಹರಿಹರದ ಮೈನರ್ ಬಸಿಲಿಕಾದಲ್ಲಿ ಒಂಬತ್ತನೇ ದಿನದ ನೊವೇನಾ ಪ್ರಾರ್ಥನೆ ಹಾಗೂ ಪವಿತ್ರ ದಿವ್ಯ ಬಲಿಪೂಜೆ ನೆರವೇರಿತು.
ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸುಳ್ಯ ತಾಲೂಕಿನ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ನಡೆಯಿತು. ಧಾರ್ಮಿಕ ಪೂಜೆ, ಭಜನೆ, ಆಟೋಟ ಸ್ಪರ್ಧೆಗಳು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಈ ಸಂದರ್ಭದಲ್ಲಿ ಜರುಗಿದವು.
ಕಿಲ್ಪಾಡಿಯ ಶ್ರೀ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ದೈವಿಕ ಆಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಲ್ಕಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಒಟ್ಟು ಸಂಖ್ಯೆ ನಾಲ್ಕಕ್ಕೇರಿದೆ.
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಶೃಂಗೇರಿ ಶಾರದಾ ಪೀಠದ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ, ಸಂತ್ರಸ್ತರಿಗೆ ಅಗತ್ಯ ಆಹಾರ ಹಾಗೂ ಪರಿಹಾರ ಸಾಮಗ್ರಿಗಳನ್ನು ತಕ್ಷಣವೇ ತಲುಪಿಸಲು ನಿರ್ದೇಶಿಸಿದ್ದಾರೆ.