
Pulse of the Public
ಕಾಲ್ಪನಿಕ ಚಿತ್ರಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿಯ ಗ್ರಾಮೀಣ ಭಾಗಗಳಿಗೆ ನೂತನ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ಸಿಮೆಂಟ್ ಮಂಜು ಚಾಲನೆ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ದಶಕಗಳ ಸಾರಿಗೆ ಸಮಸ್ಯೆ ಈಡೇರಿದೆ.
ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು ರಸ್ತೆ ವಿಭಾಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಯಲಹಂಕದ ವಿದ್ಯಾಶಿಲ್ಪ ಜಂಕ್ಷನ್ವರೆಗೆ ವಿಸ್ತರಿಸಿರುವ ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆಯಲ್ಲಿ ದ್ವಿಚಕ್ರ ವಾಹನಗಳನ್ನು ನಿಷೇಧಿಸುವ ಪ್ರಸ್ತಾವನೆಯನ್ನು ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ. ಪ್ರಾಯೋಗಿಕ ಜಾರಿಯ ವೇಳೆ ಕೆಳಸೇತುವೆ ರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ರಾಮದುರ್ಗ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯ ಕೊರತೆಯಿಂದಾಗಿ ಗ್ರಾಮೀಣ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪರದಾಡುತ್ತಿದ್ದಾರೆ. ನಿಷ್ಕ್ರಿಯಗೊಂಡಿರುವ ನೀರಿನ ಘಟಕ ದುರಸ್ತಿಗೊಳಿಸಿ ಕನಿಷ್ಠ ಸೌಲಭ್ಯ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.