
Pulse of the Public

ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ದರೋಡೆ ಹಾಗೂ ಹನಿಟ್ರ್ಯಾಪ್ ಪ್ರಕರಣಗಳ ಆರೋಪಿಗಳಾಗಿದ್ದ ಬೆಳಗಾವಿಯ ಮೂವರನ್ನು ರಸ್ತೆ ತಡೆ ನಡೆಸಿ ಬಂಧಿಸಲಾಗಿದೆ.
ಔರಾದ್ ತಾಲೂಕಿನ ಖಂಡಿಕೇರಿ ಗ್ರಾಮದ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ 60.43 ಕೆಜಿ ತೂಕದ 100 ಹಸಿ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಮೂಡಲಗಿ ತಾಲೂಕಿನ ಕುಲಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಂಗಳ ಹಿಂದೆ ನಾಪತ್ತೆಯಾಗಿದ್ದ 34 ವರ್ಷದ ಮಹಿಳೆಯ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಗಲಾಟೆ ಎಬ್ಬಿಸಿದ್ದ ಯಕ್ಸಂಬಾದ ಅನಿಲ ಪೂಜಾರಿಗೆ ಚಿಕ್ಕೋಡಿ ಜೆಎಂಎಫ್ಸಿ ನ್ಯಾಯಾಲಯ 50 ಸಸಿ ನೆಡುವ ವಿನೂತನ ಶಿಕ್ಷೆ ವಿಧಿಸಿದೆ. ತೀರ್ಪಿನಂತೆ ಆರೋಪಿಯು ತನ್ನ ಪತ್ನಿಯೊಂದಿಗೆ ಚಿಕ್ಕೋಡಿ ಕೋರ್ಟ್ ಹಾಗೂ ಸದಲಗಾ ಪೊಲೀಸ್ ಠಾಣೆ ಆವರಣದಲ್ಲಿ ಸಸಿಗಳನ್ನು ನೆಟ್ಟಿದ್ದಾರೆ.