
Pulse of the Public
ಕಾಲ್ಪನಿಕ ಚಿತ್ರಮುಂಬರುವ ಗಣೇಶ ಚತುರ್ಥಿ, ದಸರಾ ಮತ್ತು ದೀಪಾವಳಿ ಹಬ್ಬಗಳ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ವಾರಾಂತ್ಯದ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಆರಂಭಿಸಿದೆ.
ಯಲಹಂಕದ ವಿದ್ಯಾಶಿಲ್ಪ ಜಂಕ್ಷನ್ವರೆಗೆ ವಿಸ್ತರಿಸಿರುವ ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆಯಲ್ಲಿ ದ್ವಿಚಕ್ರ ವಾಹನಗಳನ್ನು ನಿಷೇಧಿಸುವ ಪ್ರಸ್ತಾವನೆಯನ್ನು ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ. ಪ್ರಾಯೋಗಿಕ ಜಾರಿಯ ವೇಳೆ ಕೆಳಸೇತುವೆ ರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ರಾಮದುರ್ಗ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯ ಕೊರತೆಯಿಂದಾಗಿ ಗ್ರಾಮೀಣ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪರದಾಡುತ್ತಿದ್ದಾರೆ. ನಿಷ್ಕ್ರಿಯಗೊಂಡಿರುವ ನೀರಿನ ಘಟಕ ದುರಸ್ತಿಗೊಳಿಸಿ ಕನಿಷ್ಠ ಸೌಲಭ್ಯ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಖಾನಾಪುರ ತಾಲೂಕಿನ ಬೆಳಗಾವಿ-ಪಣಜಿ ಹೆದ್ದಾರಿಯ ಮಾಣಿಕ್ವಾಡಿ ಕ್ರಾಸ್ ಬಳಿ ಬೈಕ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಭಾರತೀಯ ಸೇನೆಯ ಯೋಧ ಹಾಗೂ ಅವರ ಪತ್ನಿ ದುರಂತವಾಗಿ ಮೃತಪಟ್ಟಿದ್ದಾರೆ.