
Pulse of the Public
ಕಾಲ್ಪನಿಕ ಚಿತ್ರಹೊಸನಗರ ತಾಲೂಕಿನ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಸ್. ರತ್ನಾಕುಮಾರಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು 2026ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ನೀಡಿ ಗೌರವಿಸಿದರು.
ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಕವನ್ ಕುಮಾರ್ ಕಳೆದ ಆರು ವರ್ಷಗಳಿಂದ ಪ್ರತಿದಿನ ಬೆಳಿಗ್ಗೆ ಸ್ಪೋಕನ್ ಇಂಗ್ಲಿಷ್ ತರಗತಿ ನಡೆಸುತ್ತಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷಾ ಕಲಿಕೆಯಲ್ಲಿ ಆತ್ಮವಿಶ್ವಾಸ ಮೂಡಿಸಿದ್ದಾರೆ.
ಮೈಸೂರು ಜಿಲ್ಲೆಯ ಕೃಷ್ಣರಾಜನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶ್ರೀನಿವಾಸ ಡಿ ಅವರಿಗೆ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಬಿಲ್ಲೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯು ಶಿಕ್ಷಕಿ ರೂಪಾ ಅವರ ಪರಿಶ್ರಮದಿಂದ ಪುನಶ್ಚೇತನಗೊಂಡಿದೆ. ೨೦೨೩ರಲ್ಲಿ ಕೇವಲ ೬ ಮಕ್ಕಳಿದ್ದು ಮುಚ್ಚುವ ಹಂತದಲ್ಲಿದ್ದ ಶಾಲೆ, ಇದೀಗ ೧೬ ವಿದ್ಯಾರ್ಥಿಗಳ ದಾಖಲಾತಿ ಪಡೆಯುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.