
Pulse of the Public
ಕಾಲ್ಪನಿಕ ಚಿತ್ರಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಸಮೀಪ ಬೊಲೆರೋ ಪಿಕಪ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೃಷಿ ಕೆಲಸ ಮುಗಿಸಿ ವಾಪಸಾಗುತ್ತಿದ್ದ ಮೂವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್ ಬಳಿ ಕಾರಿನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ಮಾರ್ಗವಾಗಿ ಮೈಸೂರು ಮತ್ತು ಅಜ್ಮೀರ್ ನಡುವೆ ನೂತನ ಅಂತಾರಾಜ್ಯ ಎಕ್ಸ್ಪ್ರೆಸ್ ರೈಲು ಸಂಚಾರವು ಸೆಪ್ಟೆಂಬರ್ 5ರಿಂದ ಆರಂಭಗೊಂಡಿದ್ದು, ಕೊಟ್ಟೂರು ತಾಲೂಕಿನ ಜನರಿಗೆ ನೆರವಾಗಲಿದೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ಗುಳ್ಳೆದಾಳ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಶಾಲಾ ವಿದ್ಯಾರ್ಥಿಗಳ ಸಾರಿಗೆ ಸಮಸ್ಯೆಗೆ ಸ್ಪಂದಿಸಿದ ಶಾಸಕ ನೇಮಿರಾಜ್ ನಾಯಕ್, ತಕ್ಷಣವೇ ಬಸ್ ಸಂಚಾರ ಆರಂಭಿಸುವಂತೆ ಕೆಕೆಆರ್ಟಿಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.