
Pulse of the Public
ಕಮಲಾಪುರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ 'ಪ್ರಜಾಸೇವೆ' ಆಂದೋಲನ ಸಭೆ ಆಯೋಜಿಸಲಾಗಿದ್ದು, ಸಾರ್ವಜನಿಕರ ಅರ್ಜಿ ಹಾಗೂ ಕುಂದುಕೊರತೆಗಳನ್ನು ಸ್ವೀಕರಿಸಲಾಯಿತು.
ಚಿಂಚೋಳಿ ತಾಲೂಕಿನ ಕುಂಚಾವರಂ ಮಾರುಕಟ್ಟೆಯಲ್ಲಿ ಗಬ್ಬೆದ್ದು ನಾರುತ್ತಿದ್ದ ತ್ಯಾಜ್ಯದ ಕುರಿತು ವರದಿ ಪ್ರಕಟವಾದ ಬೆನ್ನಲ್ಲೇ ಗ್ರಾಮ ಪಂಚಾಯಿತಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮಾರುಕಟ್ಟೆಯನ್ನು ಸಂಪೂರ್ಣ ಸ್ವಚ್ಛಗೊಳಿಸಿದ್ದಾರೆ.
ವಿಶೇಷ ಸಾಂದ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಲ್ಲಿ ಹೆಸರು ವ್ಯತ್ಯಾಸವಾಗಿದ್ದರಿಂದ ಉಳ್ಳಾಲ ತಾಲೂಕಿನ ಪದ್ಮಶ್ರೀ ಪುರಸ್ಕೃತ ಹರೇಖಳ ಹಜಬ್ಬ ಅವರಿಗೆ ನೀಡಲಾಗಿದ್ದ ನೋಟಿಸ್ ಅನ್ನು ಚುನಾವಣಾಧಿಕಾರಿಗಳು ಹಿಂಪಡೆದಿದ್ದಾರೆ. ಹರೇಖಳ ಗ್ರಾಮದಲ್ಲಿರುವ ಹಜಬ್ಬ ಅವರ ಮನೆಗೆ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಪಟ್ಟಿಯಲ್ಲಿ ತಿದ್ದುಪಡಿ ಮಾಡಿದ್ದಾರೆ.
ಮಂಚೇನಹಳ್ಳಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಸ್ತಾನ್ ಸಾಬ್ ನೇಮಕಗೊಂಡಿದ್ದು, ಶಾಸಕ ಪ್ರದೀಪ್ ಈಶ್ವರ್ ಹಾಗೂ ನಾಯಕರಿಗೆ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.