
Pulse of the Public
ಕಾಲ್ಪನಿಕ ಚಿತ್ರಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್ಡಿಎ) ಇಲಾಖೆಯು ಆನೇಕಲ್ ತಾಲೂಕಿನ ತಟ್ಟನಹಳ್ಳಿಯಲ್ಲಿರುವ ಅಮೆಜಾನ್ ಗೋದಾಮಿನ ಮೇಲೆ ದಾಳಿ ನಡೆಸಿ, ಪರವಾನಗಿ ಇಲ್ಲದೆ ದಾಸ್ತಾನು ಮಾಡಿದ್ದ ₹2.45 ಲಕ್ಷ ಮೌಲ್ಯದ ಔಷಧಗಳು ಹಾಗೂ ₹32 ಲಕ್ಷ ಮೌಲ್ಯದ ಅವಧಿ ಮೀರಿದ ಮತ್ತು ತಪ್ಪು ಲೇಬಲಿಂಗ್ ಹೊಂದಿದ್ದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದೆ.
ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ₹25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ತಾಯಿ ಎದೆಹಾಲು ಶೇಖರಣಾ ಘಟಕವು ಅಗತ್ಯ ತಾಂತ್ರಿಕ ಉಪಕರಣ ಖರೀದಿಗೆ ₹36 ಲಕ್ಷ ಅನುದಾನ ಸಿಗದೆ ಉದ್ಘಾಟನೆಯಾಗಿ 4 ತಿಂಗಳಾದರೂ ಕಾರ್ಯಾರಂಭ ಮಾಡಿಲ್ಲ.
ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಲ-ಮೂತ್ರದ ಗುಂಡಿಯನ್ನು ಕೈಯಿಂದ ಸ್ವಚ್ಛಗೊಳಿಸಿದ ಆರೋಪದ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿ ಡಾ. ಶಂಕರ್ ಹಿರೇಗೌಡ್ರು ಮತ್ತು ನರ್ಸ್ ವನಿತಾ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮತ್ತೊಂದೆಡೆ ವೈದ್ಯರ ಏಕಾಏಕಿ ಅಮಾನತು ಖಂಡಿಸಿ ಸವಣೂರಿನಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.
ಪುತ್ತೂರಿನ ಜಿಮ್ ಒಂದರಲ್ಲಿ ಅಭ್ಯಾಸ ಮಾಡುತ್ತಿದ್ದ ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ 20 ವರ್ಷದ ವಿದ್ಯಾರ್ಥಿ ಶಮಿಕ್ ರೈ ಶನಿವಾರ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.