ಆರ್ಎಸ್ಎಸ್ ಪಥಸಂಚಲನ: ಹುಣಸಗಿ ತಾಲೂಕಿನ ಇಬ್ಬರು ಶಿಕ್ಷಕರ ಅಮಾನತಿಗೆ ಕೆಎಟಿ ತಡೆ
ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಮೇಲೆ ಅಮಾನತುಗೊಂಡಿದ್ದ ಹುಣಸಗಿ ತಾಲೂಕಿನ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಅಮಾನತು ಆದೇಶಕ್ಕೆ ಕೆಎಟಿ ತಡೆಯಾಜ್ಞೆ ನೀಡಿದೆ.

Pulse of the Public
ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಮೇಲೆ ಅಮಾನತುಗೊಂಡಿದ್ದ ಹುಣಸಗಿ ತಾಲೂಕಿನ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಅಮಾನತು ಆದೇಶಕ್ಕೆ ಕೆಎಟಿ ತಡೆಯಾಜ್ಞೆ ನೀಡಿದೆ.
ಯಾದಗಿರಿ ತಾಲೂಕಿನ ಮುದ್ನಾಳ ಹಾಗೂ ಹೊನಗೇರಾ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಕ್ಕಳೊಂದಿಗೆ ಬಿಸಿಯೂಟ ಸೇವಿಸಿದರು.
ಸಾಗರ ತಾಲೂಕಿನ ಕಿರುವಾಸೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆಂಬ ಕಾರಣಕ್ಕೆ ಮಕ್ಕಳಿಗೆ ಅತಿಥಿ ಶಿಕ್ಷಕಿಯೊಬ್ಬರು ದಂಡಿಸಿದ್ದು, ಗ್ರಾಮಸ್ಥರು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕೋಟೆಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕರೊಬ್ಬರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಶಿಕ್ಷಣ ಇಲಾಖೆಯಿಂದ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (CIT) ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ನೆರವೇರಿತು.
ಚನ್ನಗಿರಿ ತಾಲ್ಲೂಕು ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಇತ್ತೀಚೆಗೆ ನಿಧನರಾದ ಶಿಕ್ಷಕ ಹೆಚ್.ಕೆ. ಮಂಜಪ್ಪ ಅವರ ಪತ್ನಿ ಹೆಚ್. ರಾಧಾ ಅವರನ್ನು ಶಾಸಕ ಶಿವಗಂಗಾ ಬಸವರಾಜ್ ಸನ್ಮಾನಿಸಿ ಗೌರವಿಸಿದರು.
ಸುಳ್ಯ ತಾಲೂಕಿನ ಬೆಳ್ಳಾರೆ ಸರಕಾರಿ ಬಾಲಕಿಯರ ವಿದ್ಯಾರ್ಥಿನಿಲಯದ ಆವರಣಕ್ಕೆ ಅತಿಕ್ರಮಿಸಿ ಬಟ್ಟೆ ಕಳವು ಮಾಡಿದ 35 ವರ್ಷದ ವ್ಯಕ್ತಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಮೂಡಿಗೆರೆ ತಾಲೂಕಿನಲ್ಲಿ ನಿರ್ಲಕ್ಷ್ಯಕ್ಕೊಳಗಾದ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡವೊಂದು ಕುರಿ ಕೊಟ್ಟಿಗೆಯಾಗಿ ಪರಿವರ್ತನೆಯಾಗಿದ್ದು, ಗ್ರಾಮೀಣ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಸ್ಥಳೀಯ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಗೇಪಲ್ಲಿ ತಾಲೂಕಿನ ಗೂಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿ. ವೆಂಕಟೇಶ ಅವರು 2026-27ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯು ಗ್ರಾಮೀಣ ಶಿಕ್ಷಣ ಕ್ಷೇತ್ರದಲ್ಲಿ ಅವರ ಗಮನಾರ್ಹ ಸೇವೆಯನ್ನು ಗುರುತಿಸಿ ಈ ಗೌರವಕ್ಕೆ ಆಯ್ಕೆ ಮಾಡಿದೆ.
ಬ್ಯಾಂಕ್ ಸಾಲ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೆಹಳ್ಳಿಯ ಆತ್ರೇಯ ಆಯುರ್ವೇದ ಕಾಲೇಜಿಗೆ ಸಿಟಿ ಯೂನಿಯನ್ ಬ್ಯಾಂಕ್ ಬೀಗ ಹಾಕಿದ್ದು, ಶೈಕ್ಷಣಿಕ ಭವಿಷ್ಯ ರಕ್ಷಣೆಗಾಗಿ ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಪೋಷಕರ ಆರೋಪದ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆಗೆ ಸಾರ್ವಜನಿಕರು ಹಾಗೂ ಆಡಳಿತ ಆಗ್ರಹಿಸಿವೆ.
ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಯುವ ಮುಖಂಡ ಚಿದಾನಂದ ಸವದಿ ಉದ್ಘಾಟಿಸಿದರು.
ಬೆಳಗಾವಿಯ ಫೌಂಡ್ರಿ ಕ್ಲಸ್ಟರ್ನಲ್ಲಿ ನಡೆದ 'ಬೆಳಾ' ಸಂಸ್ಥೆಯ ಕಾರ್ಯಕ್ರಮದಲ್ಲಿ ಜಿಲ್ಲೆಯ 130 ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬಿಳಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಆಹಾರ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಖಂಡಿಸಿ, ಪ್ರಾಂಶುಪಾಲರು ಮತ್ತು ವಸತಿ ನಿಲಯ ಪಾಲಕರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ದಲಿತ ಹಾಗೂ ಕನ್ನಡಪರ ಸಂಘಟನೆಗಳು ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದವು.
ಬಾಗಲಕೋಟೆ ತಾಲೂಕಿನ ಮೂಗಳೊಳ್ಳಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತರಗತಿ ಛಾವಣಿ ಕುಸಿದು ವಿದ್ಯಾರ್ಥಿಗಳು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಸ್ತುವಾರಿ ಮುಖ್ಯಶಿಕ್ಷಕ ಹಾಗೂ ಇಬ್ಬರು ಇಂಜಿನಿಯರ್ಗಳನ್ನು ಅಮಾನತುಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಇಳಕಲ್ನ ಶ್ರೀ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ೨೦೨೬-೨೭ನೇ ಸಾಲಿನ ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆಗೊಂಡಿತು. ಉನ್ನತ ಶಿಕ್ಷಣದೊಂದಿಗೆ ನಾಯಕತ್ವ ಗುಣ ಹಾಗೂ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಹಿರಿಯ ಸಾಹಿತಿಗಳು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.
ಶೆಡ್ನಲ್ಲಿ ನಡೆಯುತ್ತಿದ್ದ ಡಾ. ಬಿ.ಆರ್. ಅಂಬೇಡ್ಕರ್ ಮೊರಾರ್ಜಿ ವಸತಿ ಶಾಲೆಯ 172 ವಿದ್ಯಾರ್ಥಿಗಳನ್ನು ಪೋಷಕರ ಒಪ್ಪಿಗೆಯೊಂದಿಗೆ ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರಿಗೆ ಸಮಾಜ ಕಲ್ಯಾಣ ಇಲಾಖೆ ತಾತ್ಕಾಲಿಕವಾಗಿ ಸ್ಥಳಾಂತರಿಸಿದೆ.
ಚನ್ನರಾಯಪಟ್ಟಣ ತಾಲೂಕಿನ 150 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಕೇವಲ 5 ದೈಹಿಕ ಶಿಕ್ಷಣ ಶಿಕ್ಷಕರಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ ಶಾಸಕ ಸಿ.ಎನ್. ಬಾಲಕೃಷ್ಣ, ಕ್ಲಸ್ಟರ್ ಮಟ್ಟದಲ್ಲಿ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿದರು.