ಬಿಳಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಧಿಕಾರಿಗಳ ಅಮಾನತ್ತಿಗೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಭಾರಿ ಪ್ರತಿಭಟನೆ
ಬಿಳಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಆಹಾರ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಖಂಡಿಸಿ, ಪ್ರಾಂಶುಪಾಲರು ಮತ್ತು ವಸತಿ ನಿಲಯ ಪಾಲಕರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ದಲಿತ ಹಾಗೂ ಕನ್ನಡಪರ ಸಂಘಟನೆಗಳು ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದವು.
