ಅಕ್ರಮ ಬಂಧನ ತಡೆಗೆ ಕಟ್ಟುನಿಟ್ಟಿನ ನಿಯಮ ಜಾರಿ: ಕರ್ನಾಟಕ ಡಿಜಿಪಿ ಮಹತ್ವದ ಸುತ್ತೋಲೆ
ಅಕ್ರಮ ಬಂಧನಗಳ ಕುರಿತು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದ ಬೆನ್ನಲ್ಲೇ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಕಟ್ಟುನಿಟ್ಟಿನ ಬಂಧನ ನಿಯಮಾವಳಿಗಳನ್ನು ಪಾಲಿಸುವಂತೆ ಆದೇಶಿಸಿದ್ದಾರೆ. ನೂತನ ಸುತ್ತೋಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಸೆಕ್ಷನ್ 35 ಅನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.
