ಬೆಂಗಳೂರಿನಲ್ಲಿ ಚಿನ್ನದ ದರ ಭಾರಿ ಇಳಿಕೆ: 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹2,400 ಕಡಿಮೆಯಾಗಿದೆ
ಹಬ್ಬದ ಮತ್ತು ಮದುವೆ ಸೀಸನ್ಗೆ ಮುನ್ನ ಬೆಂಗಳೂರಿನಲ್ಲಿ ಚಿನ್ನದ ದರದಲ್ಲಿ ಗಣನೀಯ ಇಳಿಕೆಯಾಗಿದ್ದು, ಗ್ರಾಹಕರಿಗೆ ಸಮಾಧಾನ ತಂದಿದೆ. 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹2,400 ಹಾಗೂ 24 ಕ್ಯಾರೆಟ್ ಚಿನ್ನದ ದರ ₹2,620 ರಷ್ಟು ಕಡಿಮೆಯಾಗಿದೆ.
