ಬಂಟವಾಳ ಕೊಲೆ ಪ್ರಕರಣ: ಆರು ಮಂದಿ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಿಸಿದ ದಕ್ಷಿಣ ಕನ್ನಡ ಡಿಸಿ
ಬಂಟವಾಳ ತಾಲೂಕಿನಲ್ಲಿ ನಡೆದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದ ಆರು ಮಂದಿ ಆರೋಪಿಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಗೂಂಡಾ ಕಾಯ್ದೆಯಡಿ ಆದೇಶ ಹೊರಡಿಸಿದ್ದಾರೆ. ಮೈಸೂರಿನ ವಿಶೇಷ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡುವ ಒಂದು ದಿನ ಮುಂಚಿತವಾಗಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.
