ಮಾಲೂರು ನಗರಸಭೆ ಕಾಮಗಾರಿ ವೀಕ್ಷಿಸಿದ ಕೋಲಾರ ಡಿಸಿ: ಸಾರ್ವಜನಿಕ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಸೂಚನೆ
ಮಾಲೂರು ಪಟ್ಟಣದ ನೂತನ ಬಸ್ ನಿಲ್ದಾಣ ಮತ್ತು ಮೇಲ್ಸೇತುವೆ ಕಾಮಗಾರಿಗಳನ್ನು ಪರಿಶೀಲಿಸಿದ ಕೋಲಾರ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್, ಕಾಮಗಾರಿಗಳ ಗುಣಮಟ್ಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ತೆರಿಗೆ ವ್ಯಾಪ್ತಿಗೆ ಬಾರದ ಆಸ್ತಿಗಳನ್ನು ಗುರುತಿಸಿ ನಗರಸಭೆ ವ್ಯಾಪ್ತಿಗೆ ತರಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
