ಸಿಂಧನೂರು: ₹9 ಕೋಟಿ ವೆಚ್ಚದ ಪಿಡಬ್ಲ್ಯುಡಿ ಕ್ಯಾಂಪ್-ಮಾಡಸಿರವಾರ ರಸ್ತೆ ಕಾಮಗಾರಿಗೆ ಶಾಸಕ ಹಂಪನಗೌಡ ಬಾದರ್ಲಿ ಭೂಮಿಪೂಜೆ
ಸಿಂಧನೂರಿನ ಪಿಡಬ್ಲ್ಯುಡಿ ಕ್ಯಾಂಪ್ನಿಂದ ಮಾಡಸಿರವಾರ ಗ್ರಾಮದವರೆಗಿನ ₹9 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹಂಪನಗೌಡ ಬಾದರ್ಲಿ ಭೂಮಿಪೂಜೆ ನೆರವೇರಿಸಿದರು.

Pulse of the Public
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕೋಟೆಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕರೊಬ್ಬರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಶಿಕ್ಷಣ ಇಲಾಖೆಯಿಂದ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
ಲಿಂಗಸಗೂರು ತಾಲೂಕಿನ ಈಚನಾಳ ಗ್ರಾಮದ ಹೋಟೆಲ್ ಒಂದರಲ್ಲಿ ದಲಿತ ಗ್ರಾಹಕರಿಗೆ ಲೋಟದಲ್ಲಿ ನೀರು ನೀಡದೆ ಮೇಲಿಂದ ಸುರಿದಿರುವ ವಿಡಿಯೊ ವೈರಲ್ ಆದ ಬೆನ್ನಲ್ಲೇ ಹೋಟೆಲ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಸ್ಕಿ ಪಟ್ಟಣದ ವೆಂಕಟಾಪುರ ರಸ್ತೆಯ ಪ್ರಜಾಸೌಧದ ಹಿಂಭಾಗದಲ್ಲಿ ಶಂಕುಸ್ಥಾಪನೆ ನೆರವೇರಿದ ನಿಗದಿತ ಸ್ಥಳದಲ್ಲೇ ನೂತನ ತಾಪಂ ಕಟ್ಟಡ ನಿರ್ಮಿಸುವಂತೆ ಕರ್ನಾಟಕ ಭೀಮ್ ಸೇನೆ ಒತ್ತಾಯಿಸಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಸಿಂಗರೇಣಿ ಕಾಲರೀಸ್ ಸಂಸ್ಥೆಯಿಂದ ಚಿನ್ನ ಮತ್ತು ತಾಮ್ರದ ಅದಿರು ಶೋಧನೆ ಯೋಜನೆಗೆ ಚಾಲನೆ ನೀಡಲಾಗಿದೆ. ಕೇಂದ್ರ ಗಣಿ ಸಚಿವಾಲಯದ ಹರಾಜಿನ ಮೂಲಕ ಪಡೆದ 199.13 ಚದರ ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ವೈಜ್ಞಾನಿಕ ಸಮೀಕ್ಷೆ ನಡೆಯಲಿದೆ.
ಸಿಂಧನೂರಿನ ಪಿಡಬ್ಲ್ಯುಡಿ ಕ್ಯಾಂಪ್ನಿಂದ ಮಾಡಸಿರವಾರ ಗ್ರಾಮದವರೆಗಿನ ₹9 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹಂಪನಗೌಡ ಬಾದರ್ಲಿ ಭೂಮಿಪೂಜೆ ನೆರವೇರಿಸಿದರು.
ಹೊಕ್ರಾಣಿ ಗ್ರಾಮದಲ್ಲಿ ನಡೆದ ಗಂಭೀರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ರಾಯಚೂರು ಎಸ್ಪಿ ಅರುಣಾಂಕ್ಷು ಗಿರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ.
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಧರ್ಮಸಿಂಗ್ ಅವರು ಮಾನ್ವಿ ಪಟ್ಟಣದ ಭಾಷುಮಿಯ ಸಾಹುಕಾರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 'ಪ್ರಜಾಸೇವೆ' ಆಂದೋಲನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 214ಕ್ಕೂ ಹೆಚ್ಚು ಕುಂದುಕೊರತೆ ಅರ್ಜಿಗಳನ್ನು ಸ್ವೀಕರಿಸಲಾಯಿತು.
ರಾಯಚೂರು ನಗರದಲ್ಲಿ ಎದುರಾಗಿರುವ ಕುಡಿಯುವ ನೀರಿನ ಕೊರತೆ ನೀಗಿಸಲು ಮತ್ತು ಮೂಲಸೌಕರ್ಯ ಮೇಲ್ದರ್ಜೆಗೇರಿಸಲು ದೀರ್ಘಾವಧಿ ಯೋಜನೆ ರೂಪಿಸುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.