ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಸಲ್ಲಿಕೆ: ಉಡುಪಿಯಲ್ಲಿ ಇಬ್ಬರ ಬಂಧನ
ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಜಾಮೀನು ಪ್ರಕ್ರಿಯೆಗೆ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಸಲ್ಲಿಸಿದ್ದ ಇಬ್ಬರು ವ್ಯಕ್ತಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಲಯದ ಅಧಿಕಾರಿಗಳ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
